Wednesday, January 22, 2025

ಸುಮಲತಾ ಸ್ಪರ್ಧೆ ಬಗ್ಗೆ ನಿಖಿಲ್ ಪ್ರತಿಕ್ರಿಯೆ

ಚಿಕ್ಕಮಗಳೂರು: ಸುಮಲತಾ ಅವರಿಗೆ ಒಳ್ಳೆಯದಾಗಲಿ ಅಂತ ನಿಖಿಲ್ ಕುಮಾರಸ್ವಾಮಿ ಚಿಕ್ಕಮಗಳೂರಿನಲ್ಲಿ ಹೇಳಿದ್ದಾರೆ. ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಅವರು ಸ್ಪರ್ಧಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸುಮಲತಾ ಅವರಿಗೆ ಒಳ್ಳೆಯದಾಗಲಿ. ಮಂಡ್ಯ ಜನತೆಗೆ ಕುಮಾರಣ್ಣ ಏನು ಎಂಬುವುದು ಗೊತ್ತಿದೆ. ಮಂಡ್ಯ ಜನರ ಪ್ರೀತಿ ಉಳಿಸಿಕೊಳ್ಳಲು ನಾನು ಪ್ರಮಾಣಿಕವಾಗಿ ಪ್ರಯತ್ನಿಸುತ್ತೇನೆ ಅಂತ ಹೇಳಿದ್ದಾರೆ.

ಇಂದು ಸುಮಲತಾ ಅವರು ಸುದ್ದಿಗೋಷ್ಠಿ ನಡೆಸಿ ತಾವು ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ. ಮಾರ್ಚ್ 18ಕ್ಕೆ ತನ್ನ ನಿರ್ಧಾರ ತಿಳಿಸುತ್ತೇನೆ ಎಂದಿದ್ದ ಸುಮಲತಾ ಅವರು ಇಂದು ಪ್ರೆಸ್​​ಮೀಟ್​ ನಡೆಸಿ ತಮ್ಮ ನಿರ್ಧಾರ ಹೇಳಿದ್ದಾರೆ. ಹಾಗೆಯೇ ಮಾರ್ಚ್​ 20ರಂದು ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ. ಪ್ರೆಸ್​ಮೀಟ್​ನಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್, ರಾಕಿಂಗ್ ಸ್ಟಾರ್ ಯಶ್, ಹಿರಿಯ ನಟ ದೊಡ್ಡಣ್ಣ, ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್, ಸುಮಲತಾ ಅವರ ಪುತ್ರ ಅಭಿಷೇಕ್​ ಅಂಬರೀಶ್​ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES