Friday, September 13, 2024

ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಕಣಕ್ಕೆ..!

ಬೆಂಗಳೂರು : ಸುಮಲತಾ ಅಂಬರೀಶ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವುದು ಪಕ್ಕಾ ಆಗಿದೆ. ಈ ಬಗ್ಗೆ ಸ್ವತಃ ಸುಮಲತಾ ಅವರೇ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ತಮ್ಮ ಅಭ್ಯರ್ಥಿಯಾಗಿ ನಿಖಿಲ್​ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ನಿರ್ಧರಿಸಿದ್ದರಿಂದ ಕಾಂಗ್ರೆಸ್​ ಟಿಕೆಟ್​ ಸುಮಲತಾ ಅವರ ಕೈ ತಪ್ಪಿತ್ತು. ಕಾಂಗ್ರೆಸ್​ ಟಿಕೆಟ್​ ಸಿಗದೇ ಇದ್ದರೂ ನಾನು ಎಲೆಕ್ಷನ್​ನಲ್ಲಿ ಕಂಟೆಸ್ಟ್​ ಮಾಡಿಯೇ ಮಾಡುತ್ತೇನೆ ಎಂದು ಸುಮಲತಾ ಅಂಬರೀಶ್​ ಈ ಹಿಂದೆಯೇ ಸ್ಪಷ್ಟಪಡಿಸಿದ್ದರು. ಆದರೆ, ಅವರು ಕೊನೇ ಕ್ಷಣದಲ್ಲಿ ಮನಸ್ಸು ಬದಲಾಯಿಸುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿತ್ತು. ಬಳಿಕ ಸುಮಲತಾ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ ಎಂಬ ಮಾತು ಕೂಡ ಕೇಳಿಬಂದಿತ್ತು. ಅದಕ್ಕೆ ಪೂರಕವಾಗಿ ಸುಮಲತಾ ಅವರು ಮಾಜಿ ಸಿಎಂ ಎಸ್​.ಎಂ ಕೃಷ್ಣ ಅವರೂ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರನ್ನು ಭೇಟಿ ಆಗಿದ್ದರು.
ಮಾರ್ಚ್ 18ಕ್ಕೆ ತನ್ನ ನಿರ್ಧಾರ ತಿಳಿಸುತ್ತೇನೆ ಎಂದಿದ್ದ ಸುಮಲತಾ ಅವರು ಇಂದು ಪ್ರೆಸ್​​ಮೀಟ್​ ನಡೆಸಿ ತಮ್ಮ ನಿರ್ಧಾರ ಸ್ಪಷ್ಟಪಡಿಸಿದ್ರು. ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ ಸುಮಲತಾ ಅವರು, ಮಾರ್ಚ್​ 20ಕ್ಕೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ರು.
ಪ್ರೆಸ್​ಮೀಟ್​ನಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್, ರಾಕಿಂಗ್ ಸ್ಟಾರ್ ಯಶ್, ಹಿರಿಯ ನಟ ದೊಡ್ಡಣ್ಣ, ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್, ಸುಮಲತಾ ಅವರ ಪುತ್ರ ಅಭಿಷೇಕ್​ ಅಂಬರೀಶ್​ ಮತ್ತಿತರರು ಉಪಸ್ಥಿತರಿದ್ದರು.

ಸುಮಲತಾ ಪ್ರೆಸ್​ಮೀಟ್​ – ದರ್ಶನ್​, ಯಶ್ ಸಾಥ್..!

ಮಾ.20ಕ್ಕೆ ನಾಮಪತ್ರ ಸಲ್ಲಿಸಿ ಸುಮಲತಾ ಅಂಬರೀಶ್ ಶಕ್ತಿ ಪ್ರದರ್ಶನ..!

RELATED ARTICLES

Related Articles

TRENDING ARTICLES