Monday, December 23, 2024

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸುಮಲತಾ ಅಂಬರೀಶ್

ಮಂಡ್ಯ : ಲೋಕಸಭಾ ಚುನಾವಣಾ ಕಣ ರಂಗೇರಿದೆ. ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಮಂಡ್ಯದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುಮಲತಾ ಅಂಬರೀಶ್ ಅವರು ನಾಮಪತ್ರ ಸಲ್ಲಿಸಿದರು. ಮಂಡ್ಯ ಜಿಲ್ಲಾ ಕಾಂಗ್ರೆಸ್​ ಮುಖಂಡ ಮಂಜುನಾಥ್ ಸೇರಿದಂತೆ ಅನೇಕ ಕೈ ನಾಯಕರು ಸುಮಲತಾ ಅವರಿಗೆ ಸಾಥ್ ನೀಡಿದ್ರು. ಅಹಿಂದ ಮುಖಂಡರು, ಗಂಗಾಮತಸ್ಥ, ಕುರುಬ, ಮುಸ್ಲೀಂ ಸಮುದಾಯದ ಮುಖಂಡರೂ ಕೂಡ ಸುಮಲತಾ ಅವರಿಗೆ ಬೆಂಬಲ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಸುಮಲತಾ ಅವರ ಪುತ್ರ, ನಟ ಅಭಿಷೇಕ್​ ಅಂಬರೀಶ್, ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್ ಕೂಡ ಉಪಸ್ಥಿತರಿದ್ದರು.
ಸುಮಲತಾ ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುತ್ತಿರುವಾಗ ಕಚೇರಿ ಹೊರಗೆ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳು ಜಯಘೋಷ ಕೂಗಿ ಬೆಂಬಲ ಸೂಚಿಸಿದರು.

RELATED ARTICLES

Related Articles

TRENDING ARTICLES