Monday, December 23, 2024

ನಾಮಪತ್ರ ಸಲ್ಲಿಸುವ ದಿನವೇ ಪ್ರತಾಪ್​ ಸಿಂಹ ವಿರುದ್ಧ ಎಫ್​ಐಆರ್..!

ಮೈಸೂರು : ಮೈಸೂರು-ಕೊಡುಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರಿಗೆ ನಾಮಮಪತ್ರ ಸಲ್ಲಿಸುವ ದಿನವೇ ಶಾಕ್ ಆಗಿದೆ.
ಇಂದು ಪ್ರತಾಪ್​ ಸಿಂಹ ನಾಮಪತ್ರ ಸಲ್ಲಿಸಲಿದ್ದಾರೆ. ಇದರ ಬೆನ್ನಲ್ಲೇ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಸಿಂಹ ವಿರುದ್ಧ ಎಫ್​ಐಆರ್ ದಾಖಲಾಗಿದೆ.
ಪ್ರತಾಪ್​​ ಸಿಂಹ ಸರ್ಕಾರಿ ಅಂಚೆಕಚೇರಿ ಮೂಲಕ ಕೇಂದ್ರ ಸರ್ಕಾರದ ಸಾಧನಾ ಕೈಪಿಡಿಯನ್ನು​ ಹಂಚಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಾಪ್​ ಸಿಂಹ ಅವರ ವಿರುದ್ಧ ಕಾಂಗ್ರೆಸ್​ ದೂರು ನೀಡಿತ್ತು. ಮೈಸೂರಿನ ವಿವಿ ಪುರಂ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES