Monday, December 9, 2024

ರಾತ್ರೋರಾತ್ರಿ ಬೆಂಗಳೂರು ಉತ್ತರ ‘ಕೈ’ ತೆಕ್ಕೆಗೆ..!

ಬೆಂಗಳೂರು : ರಾತ್ರೋರಾತ್ರಿ ದೋಸ್ತಿ ಪಾಳಯದಲ್ಲಿ ನಡೆದ ಮಹತ್ವದ ಬೆಳವಣಿಗೆಯಲ್ಲಿ ಜೆಡಿಎಸ್​ ಬೆಂಗಳೂರು ಉತ್ತರವನ್ನು ಕಾಂಗ್ರೆಸ್​ಗೆ ಬಿಟ್ಟುಕೊಟ್ಟಿದೆ.
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ 8 ಕ್ಷೇತ್ರಗಳಲ್ಲಿ ಜೆಡಿಎಸ್​ ಅಭ್ಯರ್ಥಿಯನ್ನು ಕಣಕ್ಕಿಳಿಸೋದು ಅಂತ ನಿರ್ಧಾರವಾಗಿತ್ತು.
ತುಮಕೂರು, ಹಾಸನ, ಮಂಡ್ಯ, ಶಿವಮೊಗ್ಗ, ಉತ್ತರ ಕನ್ನಡ, ಬೆಂಗಳೂರು ಉತ್ತರ, ವಿಜಯಪುರ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್​ಗೆ ಕಾಂಗ್ರೆಸ್ ಬಿಟ್ಟುಕೊಟ್ಟಿತ್ತು. ಆದರೆ ಜೆಡಿಎಸ್​ ಬೆಂಗಳೂರು ಉತ್ತರವನ್ನೀಗ ಕಾಂಗ್ರೆಸ್​ಗೆ ಬಿಟ್ಟು ಕೊಟ್ಟಿದೆ. 21 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಹಾಗೂ 7 ಕ್ಷೇತ್ರಗಳಲ್ಲಿ ಜೆಡಿಎಸ್​ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ.

RELATED ARTICLES

Related Articles

TRENDING ARTICLES