ಮಂಡ್ಯ : ಇಡೀ ರಾಜ್ಯದ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರ ದಿನೇ ದಿನೇ ರಂಗೇರುತ್ತಿದೆ. ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಭರ್ಜರಿ ರೋಡ್ ಶೋ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಕೂಡ ಬೃಹತ್ ರ್ಯಾಲಿ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ್ದರು. ಅವರಿಗೆ ಟಾಂಗ್ ಕೊಡುವಂತೆ ನಿಖಿಲ್ ಅವರೂ ಬೃಹತ್ ಮೆರವಣಿಗೆ ಮೂಲಕ ತೆರಳಿ ನಾಮಿನೇಷನ್ ಫೈಲ್ ಮಾಡಿದ್ದಾರೆ. ನಿಖಿಲ್ಗೆ ಸಿಎಂ ಕುಮಾರಸ್ವಾಮಿ, ಸಚಿವ ಹೆಚ್.ಡಿ ರೇವಣ್ಣ, ತಾಯಿ ಅನಿತಾ ಕುಮಾರಸ್ವಾಮಿ ಸಾಥ್ ನೀಡಿದ್ದಾರೆ.