Friday, September 20, 2024

ಬಿಎಸ್​ವೈ ಭೇಟಿ ಮಾಡಿದ ಸುಮಲತಾ

ಬೆಂಗಳೂರು : ಮಂಡ್ಯ ‘ಲೋಕ’ ಕಣದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ.
ಡಾಲರ್ಸ್ ಕಾಲೋನಿಯಲ್ಲಿರುವ ಬಿ.ಎಸ್​ ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿದ ಸುಮಲತಾ, ತಮಗೆ ಬೆಂಬಲ ನೀಡಲು ಮುಂದಾಗಿರುವುದಕ್ಕೆ ಬಿಎಸ್​ವೈಗೆ ಕೃತಜ್ಞತೆಸಲ್ಲಿಸಿದ್ರು.
ಜೆಡಿಎಸ್​ ಅಭ್ಯರ್ಥಿ (ಮೈತ್ರಿ ಅಭ್ಯರ್ಥಿ) ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದಾರೆ. ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಸುಮಲತಾ ಅವರಿಗೆ ಬೆಂಬಲ ಘೋಷಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​ ಯಡಿಯೂರಪ್ಪ ಅವರು ಸುಮಲತಾಗೆ ಬೆಂಬಲ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮಲತಾ ಅವರ ಔಪಚಾರಿಕ ಭೇಟಿ ಮಾಡಿದ್ದಾರೆ.

RELATED ARTICLES

Related Articles

TRENDING ARTICLES