Wednesday, November 6, 2024

ಮಿಥುನ್ ರೈ ಪರ ಡಿಕೆಶಿ ಪ್ರಚಾರ

ದಕ್ಷಿಣ ಕನ್ನಡ: ಕಾಂಗ್ರೆಸ್​ ಟ್ರಬಲ್​ ಶೂಟರ್ ಸಚಿವ ಡಿ. ಕೆ. ಶಿವಕುಮಾರ್​ ಅವರು ಇಂದು ಕರಾವಳಿ ಜಿಲ್ಲೆಯಲ್ಲಿ ಮೈತ್ರಿ ಅಭ್ಯರ್ಥಿ, ಆಪ್ತ ಮಿಥುನ್ ರೈ ಪರ ಪ್ರಚಾರ ನಡೆಸಲಿದ್ದಾರೆ. ದಕ್ಷಿಣ ಕನ್ನಡದಲ್ಲಿ ಲೋಕಸಭೆ ಚುನಾವಣಾ ಪ್ರಚಾರಕ್ಕೆ ಡಿಕೆಶಿ ಮುಂದಾಗಿದ್ದು, ಮಿಥುನ್ ರೈ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ದಕ್ಷಿಣ ಕನ್ನಡದ ಬೆಳ್ತಂಗಡಿ ಹಾಗೂ ಪುತ್ತೂರಿನಲ್ಲಿ ಬಹಿರಂಗ ಸಮಾವೇಶ ನಡೆಸಿ, ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ. ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮೈತ್ರಿ ಅಭ್ಯರ್ಥಿಯಾಗಿ ಯುವ ನಾಯಕ ಮಿಥುನ್ ರೈ ಕಣಕ್ಕಿಳಿಯುತ್ತಿದ್ದಾರೆ. ನಿನ್ನೆ, ಮೊನ್ನೆ ಶಿವಮೊಗ್ಗದಲ್ಲಿ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಪರ ಡಿ. ಕೆ. ಶಿವಕುಮಾರ್ ಪ್ರಚಾರ ನಡೆಸಿದ್ದರು. ಇಂದೀಗ ಮಿಥುನ್ ರೈ ಪರ ಪ್ರಚಾರ ಕಾರ್ಯ ನಡೆಸಲಿದ್ದಾರೆ.

RELATED ARTICLES

Related Articles

TRENDING ARTICLES