Thursday, December 26, 2024

ದೇವೇಗೌಡರ ಕುಟುಂಬದಿಂದ ಓಂಕಾಂರೇಶ್ವರನಿಗೆ ಪೂಜೆ

ತುಮಕೂರು: ಮಾಜಿ ಪ್ರಧಾನಿ ಹೆಚ್​. ಡಿ. ದೇವೇಗೌಡ, ಸಿಎಂ ಹೆಚ್​. ಡಿ. ಕುಮಾರಸ್ವಾಮಿ ಅವರು ಮಕ್ಕಳು, ಮೊಮ್ಮಕ್ಕಳ ಹೆಸರಲ್ಲಿ ಓಂಕಾಂರೇಶ್ವರನಿಗೆ ಪೂಜೆ ಸಲ್ಲಿಸಿದ್ದಾರೆ. ಪಟ್ಟನಾಯಕನಹಳ್ಳಿ ಗುರುಗುಂಡ ಬ್ರಹ್ಮೇಶ್ವರ ಮಠದಲ್ಲಿರುವ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. ಇದಕ್ಕೂ ಮೊದಲು ಗುರುಗುಂಡ ಬ್ರಹ್ಮೇಶ್ವರ ದೇವಸ್ಥಾನದಲ್ಲಿ ನಡೆದ ಪೂಜೆಯಲ್ಲಿ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ಭಾಗವಹಿಸಿದ್ದು, ನಂಜಾವದೂತ ಸ್ವಾಮೀಜಿ‌ ನೇತೃತ್ವದಲ್ಲಿ ಹೋಮ ಹವನ ನಡೆಯಿತು. ಶಾಸಕ ಸತ್ಯನಾರಾಯಣ, ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರೂ ಉಪಸ್ಥಿತರಿದ್ದರು. ಲೋಕಸಭಾ ಚುನಾವಣೆಯಲ್ಲಿ ಗೆಲುವಿಗಾಗಿ ದೇವೇಗೌಡರ ಕುಟುಂಬ ಪೂಜೆಯಲ್ಲಿ ಪಾಲ್ಗೊಂಡಿದೆ. ಪೂಜೆಯ ನಂತರ ಸಿಎಂ ಕುಮಾರಸ್ವಾಮಿ, ದೇವೇಗೌಡ ಅವರೂ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.

RELATED ARTICLES

Related Articles

TRENDING ARTICLES