Friday, July 19, 2024

ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷೆಯಾಗಿ ತೇಜಸ್ವಿನಿ ಅನಂತ್ ಕುಮಾರ್​ ನೇಮಕ

ಬೆಂಗಳೂರು: ತೇಜಸ್ವಿನಿ ಅನಂತ್ ಕುಮಾರ್​ ಅವರನ್ನು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆಯಾಗಿ ನೇಮಿಸಲಾಗಿದೆ. ತೇಜಸ್ವಿನಿ ಅನಂತ್ ಕುಮಾರ್​ ಅವರನ್ನು ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷೆಯಾಗಿ ನೇಮಿಸಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್​. ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದಾರೆ. ಮಾಜಿ ಕೇಂದ್ರ ಸಚಿವ ದಿ. ಅನಂತ್​ಕುಮಾರ್​ ಅವರ ಪತ್ನಿ ತೇಜಸ್ವಿನಿ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಆದರೆ ಯುವನಾಯಕ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್​ ನೀಡಿ ಅಖಾಡಕ್ಕಿಳಿಸಲಾಗಿದೆ. ತೇಜಸ್ವಿನಿ ಅವರಿಗೆ ಟಿಕೆಟ್ ಕೈತಪ್ಪಿದ್ದು ಅವರ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರಧಾನಿ ಮೋದಿ ಅವರ ಯಶಸ್ಸಿಗಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕೆಂದು ಅವರು ಬೆಂಬಲಿಗರಿಗೆ ಕರೆ ನೀಡಿದ್ದರು.

RELATED ARTICLES

Related Articles

TRENDING ARTICLES