ಬೆಂಗಳೂರು: ರಾಜ್ಯದಲ್ಲಿ ಇಂದು ಎರಡನೇ ಹಂತದ ನಾಮಿನೇಷನ್ ಪ್ರಕ್ರಿಯೆ ನಡೆಯಲಿದೆ. ಎರಡನೇ ಹಂತದ ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆಯ ದಿನವಾಗಿದ್ದು. ಘಟಾನುಘಟಿ ನಾಯಕರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಹಾವೇರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಆರ್.ಪಾಟೀಲ್ ಇಂದು ನಾಮಪತ್ರ ಸಲ್ಲಿಸಲಿದ್ದು, ನಾಮಪತ್ರ ಸಲ್ಲಿಸುವುದಕ್ಕಿಂತ ಮುಂಚೆ ಬೃಹತ್ ಮೆರವಣಿಗೆ ನಡೆಯಲಿದೆ. ನಾಮಪತ್ರ ಸಲ್ಲಿಸಿದ ನಂತರ ಕಾಂಗ್ರೆಸ್ ನಾಯಕರು ಸಮಾವೇಶ ಹಮ್ಮಿಕೊಂಡಿದ್ದಾರೆ. ಸಮಾವೇಶದಲ್ಲಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜಮೀರ್ ಅಹಮದ್ ಖಾನ್ ಸೇರಿ ಹಲವು ಮುಖಂಡರು ಭಾಗಿಯಾಗಲಿದ್ದಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ನಾಮಿನೇಷನ್ ನೀಡಲಿದ್ದಾರೆ. ಧಾರವಾಡ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನಯ ಕುಲಕರ್ಣಿ ಕೂಡ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಕೂಡ ನಾಮಪತ್ರ ಸಲ್ಲಿಸಲಿದ್ದಾರೆ
ಚಿಕ್ಕೋಡಿಯಲ್ಲಿ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆನಾಮಪತ್ರ ಸಲ್ಲಿಸಲಿದ್ದಾರೆ. ಮಧ್ಯಾಹ್ನ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಕಲಬುರಗಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಉಮೇಶ್ ಜಾಧವ್ ನಾಮಪತ್ರ ಸಲ್ಲಿಸಲಿದ್ದಾರೆ.
ದಾವಣಗೆರೆ ಕೈ ಟಿಕೆಟ್ ಆಕಾಂಕ್ಷಿಯಾಗಿದ್ದ ಶಾಮನೂರು ಕುಟುಂಬದ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಲೋಕ ಸಮರಕ್ಕೆ ಸ್ಫರ್ಧಿಸುವುದಾಗಿ ಹೇಳಿದ್ರು. ಆದ್ರೆ ಕಾಂಗ್ರೆಸ್ ಹೈಕಮಾಂಡ್ ಮಾತ್ರ ಹೆಚ್.ಬಿ. ಮಂಜಪ್ಪ ಅಭ್ಯರ್ಥಿ ಅಂತ ಘೋಷಣೆ ಮಾಡಿರೋದು ಅಚ್ಚರಿ ಮೂಡಿಸಿದೆ.