Wednesday, October 30, 2024

ದಿನಬೆಳಗಾದ್ರೆ ಮಂಡ್ಯದ್ದೇ ಸುದ್ದಿ – ಮಾಧ್ಯಮಗಳ ಬಗ್ಗೆ ಸಿಎಂ ಅಸಮಾಧಾನ

ಮಂಡ್ಯ: ದಿನ ಬೆಳಗಾದ್ರೆ ಮಂಡ್ಯದ್ದೇ ಸುದ್ದಿ. ನೀವು ಏನೇ ಪ್ರಯತ್ನಪಟ್ಟರೂ,ಎಷ್ಟೇ ಅಪಪ್ರಚಾರ ಮಾಡಿದ್ರೂ ಮಂಡ್ಯ ಜನತೆಯನ್ನ ಬದಲಾವಣೆ ಮಾಡಲು ಸಾದ್ಯವಿಲ್ಲ ಅಂತ ಸಿಎಂ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಹಾಸನ- ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಬಾಲಕೃಷ್ಣ ಮನೆಯಲ್ಲಿ ಉಪಹಾರ ಸೇವಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ  ಅವರು ಮಾದ್ಯಮಗಳ ಬಗ್ಗೆ ತಮ್ಮ ಅಸಮಧಾನ ವ್ಯಕ್ತಪಡಿಸಿದ್ದಾರೆ.

“ವಾಹಿನಿಗಳ ಮಾಲೀಕರು ನಿರಾಸೆಗೊಳಗಾಗುತ್ತೀರಾ. ನಾನೇನು ಗಾಬರಿಯಾಗಿಲ್ಲ,ಆತಂಕಗೊಂಡಿಲ್ಲ. ಮೇ 23ಕ್ಕೆ ಫಲಿತಾಂಶ ಬಂದಾಗ ಎಲ್ಲವೂ ಗೊತ್ತಾಗಲಿದೆ. ಮಂಡ್ಯದಲ್ಲಿ ಕೆಲವು ಸಮಸ್ಯೆಗಳಾಗುತ್ತಿವೆ. ಇದರಿಂದ ಅಕ್ಕಪಕ್ಕದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಮಸ್ಯೆ ಆಗದಂತೆ ನಾನೇ ಖುದ್ದು ಭೇಟಿ ನೀಡಿ ಸಮಸ್ಯೆ ಬಗೆಹರಿಸುತ್ತಿದ್ದೇನೆ. ನರೇಂದ್ರ ಮೋದಿಗೂ ಇದು ಸುಲಭದ ಚುನಾವಣೆ ಅಲ್ಲ. 2014 ಕ್ಕು 2019 ಕ್ಕೂ ಸಾಕಷ್ಟು ಬದಲಾವಣೆ ಆಗಿದೆ. ನಮ್ಮನ್ನ ಕಿಚಡಿ ಪಾರ್ಟಿ ಅಂತಾರೆ. ಅವರು ಕಳೆದ ಐದು ವರ್ಷದಲ್ಲಿ ಅಭಿವೃದ್ಧಿ ಮಾಡಿದ್ರೆ ಪ್ರಾದೇಶಿಕ ಪಕ್ಷಗಳ ಮುಂದೆ ಹೋಗಿ ನಿಲ್ಲಬೇಕಿರಲಿಲ್ಲ. ರೈತರು ಈ ಬಿಜೆಪಿ ಅಧಿಕಾರದಿಂದ ನೊಂದಿದ್ದಾರೆ. ದೇವೇಗೌಡರರಿಗೆ ರಾಷ್ಟ್ರ ರಾಜಕಾರಣದಲ್ಲಿ ವಿಶೇಷ ಶಕ್ತಿ ಬರೋ ವಾತಾವರಣ ಬರಲಿದೆ. ಹಾಗಂತ ಪ್ರದಾನಿ ಆಗ್ತಾರೆ ಅಂತಾ ನಾನು ಹೇಳುತ್ತಿಲ್ಲ” ಅಂತ ಹೇಳಿದ್ದಾರೆ.

RELATED ARTICLES

Related Articles

TRENDING ARTICLES