Friday, April 12, 2024

ಕೆ. ರತ್ನಪ್ರಭಾ ಬಿಜೆಪಿಗೆ

ಕಲಬುರಗಿ: ಜನರ ನಿರೀಕ್ಷೆಯಂತೆ ನಾನು ಬಿಜೆಪಿ ಸೇರುತ್ತಿದ್ದೇನೆ ಅಂತ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರು ಕಲಬುರಗಿಯಲ್ಲಿ ಹೇಳಿದ್ದಾರೆ. ಕಲಬುರಗಿ ತಾವು ಬಿಜೆಪಿ ಪಕ್ಷಗೆ ಸೇರುವ ಬಗ್ಗೆ ಪ್ರತಿಕ್ರಿಯಿಸಿದ ರತ್ನಪ್ರಭಾ ಅವರು, “ಜನಸೇವೆ ಮಾಡೋ ಉದ್ದೇಶದಿಂದ ಬಿಜೆಪಿ ಸೇರ್ತಿದ್ದೇನೆ. ಅದನ್ನು ಬಿಟ್ಟು ಬೇರೆ ಯಾವುದೇ ಉದ್ದೇಶವಿಲ್ಲ. ರಾಜ್ಯಾದಂತ ಬಿಜೆಪಿ ಪರ ಕೆಲಸ ಮಾಡುತ್ತೇನೆ. ಪ್ರಧಾನಿ ಮೋದಿ ಉತ್ತಮ ಆಡಳಿತ ನೀಡ್ತಾ ಇದ್ದಾರೆ” ಅಂತ ಹೇಳಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿವೆ.

ಕಲಬುರಗಿಯಲ್ಲಿ ಬಿಜೆಪಿ ಅಭ್ಯರ್ಥಿ ಜಾಧವ್ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಕೆ.ರತ್ನಪ್ರಭಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್​. ಯಡಿಯೂರಪ್ಪ ನೇತೃತ್ವದಲ್ಲಿ ಕೆ. ರತ್ನಪ್ರಭಾ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಸನ್ಮಾನ ಮಾಡುವ ಮೂಲಕ ರತ್ನಪ್ರಭಾ ಅವರನ್ನು ಬಿಜೆಪಿ ಮುಖಂಡರು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES