Wednesday, May 22, 2024

ಮಂಡ್ಯದಲ್ಲಿ ಕಾಂಗ್ರೆಸ್​ ಮುಖಂಡನಿಗೆ ಐಟಿ ಶಾಕ್​!

ಮಂಡ್ಯ: ಲೋಕಸಭಾ ಚುನಾವಣೆ ಸಮೀಪಿಸಿದ್ದು ಐಟಿ ಅಧಿಕಾರಿಗಳು ರಾಜಕೀಯ ಮುಖಂಡರಿಗೆ ಶಾಕ್ ಕೊಡ್ತಿದ್ದಾರೆ. ದೇಶದ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲೀಗ ಕಾಂಗ್ರೆಸ್ ಮುಖಂಡನ ಮನೆ ಮೇಲೆ ಐಟಿ ದಾಳಿ ನಡೆದಿದೆ. ಸುಮಲತಾ ಹಾಗೂ ನಿಖಿಲ್​ ಸ್ಪರ್ಧೆಯಿಂದ ಮಂಡ್ಯ ಚುನಾವಣಾ ಕಣ ರಂಗೇರಿದ್ದು, ಇದರ ನಡುವೆಯೇ ಕಾಂಗ್ರೆಸ್ ಮುಖಂಡರೊಬ್ಬರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಮಂಡ್ಯದ ಕಾಂಗ್ರೆಸ್ ಮುಖಂಡ ಎಂ.ಎಸ್. ಆತ್ಮಾನಂದ ಅವರ ಸುಭಾಷ್ ನಗರದ 1ನೇ ತಿರುವಿನಲ್ಲಿರುವ ಮನೆ ಮೇಲೆ ಐಟಿ ದಾಳಿ ನಡೆದಿದೆ. ನಾಲ್ಕೈದು ಅಧಿಕಾರಿಗಳ ತಂಡ ಸಡನ್ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಹಾಗೆಯೇ ಮನೆಯಲ್ಲಿ ಇದ್ದವರನ್ನು ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.

RELATED ARTICLES

Related Articles

TRENDING ARTICLES