Monday, December 23, 2024

ಶಿವಮೊಗ್ಗದಲ್ಲಿ ‘ದೋಸ್ತಿ’ ಶಕ್ತಿ ಪ್ರದರ್ಶನ

ಶಿವಮೊಗ್ಗ: ಲೋಕಸಭಾ ಚುನಾವಣೆಯ ಶಿವಮೊಗ್ಗ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿಂದು ದೋಸ್ತಿ ಪಕ್ಷಗಳ ಶಕ್ತಿಪ್ರದರ್ಶನ ನಡೆಯಲಿದ್ದು, ಸಿ.ಎಂ. ಕುಮಾರಸ್ವಾಮಿ, ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಅವರೂ ಭಾಗಿಯಾಗಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ನಗರದಲ್ಲಿ ಬೃಹತ್ ಮೆರವಣಿಗೆ ನಡೆಯಲಿದ್ದು, ಬೆಳಗ್ಗೆ 11 ಗಂಟೆಗೆ ಬೃಹತ್​ ಮೆರವಣಿಗೆ ಆರಂಭವಾಗಲಿದೆ. ನಗರದ ರಾಮಶ್ರೇಷ್ಠಿ ಗಣಪತಿ ಪಾರ್ಕ್ ಆವರಣದಿಂದ, ಗಾಂಧಿ ಬಜಾರ್, ನೆಹರು ರಸ್ತೆ, ಸೇರಿದಂತೆ ಪ್ರಮುಖ ರಸ್ತೆಗಳ ಮೂಲಕ ಮೆರವಣಿಗೆ ಸಾಗಿ ಬರಲಿದೆ. ಸುಮಾರು 40 ಸಾವಿರ ಜನರು ಮೆರವಣಿಗೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಮೆರವಣಿಗೆಯಲ್ಲಿ ಪ್ರಮುಖ ದೋಸ್ತಿ ಮುಖಂಡರು ಭಾಗಿಯಾಗಲಿದ್ದಾರೆ.

RELATED ARTICLES

Related Articles

TRENDING ARTICLES