ಬೆಂ.ಗ್ರಾಮಾಂತರ: ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರ ಆಪ್ತರ ಮನೆ ಮೇಲೆ ಐಟಿ ದಾಳಿ ನಡೆದಿದೆ. ಹೊಸಕೋಟೆಯ ಜೆಡಿಎಸ್ ಅಧ್ಯಕ್ಷ ವಿ.ಶ್ರೀಧರ್ ಮನೆ ಮೇಲೆ ದಾಳಿ ನಡೆದಿದ್ದು, ಸುಮಾರು 18 ಜನರ ತಂಡ ದಾಳಿ ಮಾಡಿದ್ದಾರೆ. ನಿನ್ನೆ ಬೆಳಗ್ಗೆ 5 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ಆದರೆ ದಾಳಿಯ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಶ್ರೀಧರ್ ಅವರ ಮನೆಯಿಂದ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ನಾಳೆ ಐಟಿ ಅಧಿಕಾರಿಗಳು ವಿಚಾರಣೆ ನಡೆಸುವ ಸಾಧ್ಯತೆ ಇದೆ.