ವಯನಾಡ್: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಹೋದರಿ ಪ್ರಿಯಾಂಕ ವಾದ್ರಾ ಜೊತೆ ಕೇರಳದ ವಯನಾಡ್ಗೆ ಬಂದಿಳಿದಿದ್ದಾರೆ. ಹೆಲಿಕಾಪ್ಟರ್ ಮೂಲಕ ಬಂದ ರಾಹುಲ್ ಗಾಂಧಿ ಇಂದು ಬೆಳಗ್ಗೆ ವಯನಾಡ್ಗೆ ತಲುಪಿದ್ದಾರೆ. ಇದೇ ಮೊದಲ ಬಾರಿಗೆ ರಾಹುಲ್ ಗಾಂಧಿ ಅವರು ಎರಡನೇ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ವಯನಾಡ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಹುಲ್ ಇಂದು ನಾಮಪತ್ರ ಸಲ್ಲಿಸಲಿದ್ದಾರೆ ಕಾಂಗ್ರೆಸ್ ಕಾರ್ಯಕರ್ತರೂ, ಬೆಂಬಲಿಗರೂ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು, ಭರ್ಜರಿ ರೋಡ್ ಶೋ ಆರಂಭವಾಗಿದೆ. ಬುಧವಾರ ರಾತ್ರಿಯೇ ರಾಹುಲ್ಗಾಂಧಿ ಕೋಝಿಕ್ಕೋಡ್ಗೆ ಬಂದಿಳಿದಿದ್ದಾರೆ. ಮಾಜಿ ಮುಖ್ಯಮಂತ್ರಿ ಉಮನ್ ಚಾಂಡಿ ಅವರು ರಾಹುಲ್ ಅವರನ್ನು ಬರಮಾಡಿಕೊಂಡಿದ್ದಾರೆ.