Wednesday, May 22, 2024

ಇಂದು ರಾಜ್ಯದ 2 ನೇ ಹಂತದ ನಾಮಿನೇಷನ್​ಗೆ ಕೊನೆ ದಿನ

ಬೆಂಗಳೂರು: ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಎರಡನೇ ಹಂತದ ನಾಮಿನೀಷನ್​ಗೆ ಇಂದು ಕೊನೆಯ ದಿನವಾಗಿದೆ. ಕೊನೆಯ ದಿನವಾದ ಇಂದು ಘಟಾನುಘಟಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಉಮೇದುವಾರಿಕೆ ಸಲ್ಲಿಕೆ ವೇಳೆ ಶಕ್ತಿಪ್ರದರ್ಶನ ಮಾಡುವುದಕ್ಕೂ ರಾಜಕೀಯ ಮುಖಂಡರೂ ಸಜ್ಜಾಗಿದ್ದಾರೆ. ಸಂಜೆಯೊಳಗೆ ಎಲ್ಲಾ ಕ್ಷೇತ್ರಗಳ ಅಧಿಕೃತ ಅಭ್ಯರ್ಥಿಗಳ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ.

ಕಲಬುರಗಿ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಮಧ್ಯಾಹ್ನ 2 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ದಾವಣಗೆರೆ ಕ್ಷೇತ್ರದ ಕಾಂಗ್ರೆಸ್​, ಬಿಜೆಪಿ ಅಭ್ಯರ್ಥಿಗಳೂ ನಾಮಿನೇಷನ್​ ಸಲ್ಲಿಸಲಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಹೆಚ್.ಬಿ.ಮಂಜಪ್ಪ ಅವರು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಜಿ.ಎಂ.ಸಿದ್ದೇಶ್ವರ್ ಕೂಡ​ ನಾಮಪತ್ರ ಸಲ್ಲಿಸಲಿದ್ದಾರೆ. ಸಿದ್ದೇಶ್ವರ್​ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಶಾಸಕರಾದ ಈಶ್ವರಪ್ಪ, ಶ್ರೀರಾಮುಲು ಸಾಥ್​ ನೀಡಲಿದ್ದಾರೆ.

ಕಾರವಾರದಲ್ಲಿ ಜೆಡಿಎಸ್ ಅಭ್ಯರ್ಥಿ ಆನಂದ್​​​ ಅಸ್ನೋಟಿಕರ್ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಹೆಚ್.​ಡಿ. ಕುಮಾರಸ್ವಾಮಿ, ಆರ್​.ವಿ.ದೇಶಪಾಂಡೆ, ಮಧುಬಂಗಾರಪ್ಪ ಸೇರಿ ಹಲವು ನಾಯಕರು ಉಪಸ್ಥಿತರಿರಲಿದ್ದಾರೆ. ಹಾವೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ​ ಶಿವಕುಮಾರ್​ ಉದಾಸಿ ಅವರೂ ನಾಮಿನೇಷನ್ ಸಲ್ಲಿಸಲಿದ್ದು, ಬಿಜೆಪಿ ನಾಯಕರು ಸಾಥ್ ನೀಡಲಿದ್ದಾರೆ. ಬಾಗಲಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗದ್ದಿಗೌಡರ್ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ.

RELATED ARTICLES

Related Articles

TRENDING ARTICLES