Monday, December 9, 2024

ನಿರ್ಮಾಣ ಹಂತದ ಕಟ್ಟಡ ಕುಸಿತ – ಇಬ್ಬರು ಸಾವು

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರ ಮೃತಪಟ್ಟಿರುವ ಘಟನೆ ಯಶವಂತಪುರದ ಎಪಿಎಂಸಿ ಯಾರ್ಡ್​ನಲ್ಲಿ ನಡೆದಿದೆ. ಅವಘಡದಲ್ಲಿ ಬಿಹಾರ ಮೂಲದ ರಾಹುಲ್, ರಾಕೇಶ್ ಮೃತಪಟ್ಟಿದ್ದಾರೆ. . ಘಟನೆಯಲ್ಲಿ 12 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನ ನಿಲುಗಡೆಗಾಗಿ ಕಟ್ಟಡ ನಿರ್ಮಿಸಲಾಗುತ್ತಿತ್ತು. ಆರ್​ಎಂಸಿ ಯಾರ್ಡ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಎಂಜಿನಿಯರ್ ಉಮಾಶಂಕರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನಾ ಸ್ಥಳಕ್ಕೆ ಉತ್ತರ ವಲಯ ಡಿಸಿಪಿ ಶಶಿಕುಮಾರ್ ಭೇಟಿ ನೀಡಿದ್ದಾರೆ. ಶಶಿಕುಮಾರ್ ಅವರು ಸ್ಥಳ ಪರಿಶೀಲನೆ ನಡೆಸಿದ್ದು, ಗುತ್ತಿಗೆದಾರರು,‌ ಮಾಲೀಕರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ ಅಂತ ಹೇಳಿದ್ದಾರೆ. ಘಟನೆ ಬಗ್ಗೆ ಎಪಿಎಂಸಿ ಕಾರ್ಯದರ್ಶಿ ಅನಿಲಾ ಕುಮಾರಿ ಪ್ರತಿಕ್ರಿಯಿಸಿದ್ದು, “600 ವಾಹನಗಳ ನಿಲುಗಡೆಗೆ ಅನುಕೂಲವಾಗುವಂತೆ 77 ಕೋಟಿ ರೂಪಾಯಿ ವೆಚ್ಚದಲ್ಲಿ ಪಾರ್ಕಿಂಗ್ ಕಟ್ಟಡ ನಿರ್ಮಿಸಲಾಗುತ್ತಿತ್ತು. ಈರುಳ್ಳಿ ಬೆಳೆಗಾರರು ಬಂದಾಗ ವಾಹನ ನಿಲುಗಡೆಗೆ ಸಮಸ್ಯೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕಟ್ಟಡ ಕಾಮಗಾರಿ ನಡೆಯುತ್ತಿತ್ತು. ಸ್ಟಾರ್ ಕನ್ಸ್​ಟ್ರಕ್ಷನ್​ ಕಂಪನಿಗೆ ಗುತ್ತಿಗೆ ಕೊಡಲಾಗಿತ್ತು. 24 ತಿಂಗಳಲ್ಲಿ ಕಾಮಗಾರಿ ಮುಗಿಸಲು ಹೇಳಲಾಗಿತ್ತು. ಎಂನಿಯರ್​​​​, ಗುತ್ತಿಗೆದಾರರ ಸಭೆ ಕರೆಯಲಾಗಿದೆ. ಘಟನೆಗೆ ಕಾರಣವಾದ ಮಾಹಿತಿ ಕಲೆ ಹಾಕಲಾಗುತ್ತೇವೆ” ಅಂತ ಹೇಳಿದ್ದಾರೆ.

RELATED ARTICLES

Related Articles

TRENDING ARTICLES