Wednesday, September 18, 2024

ಇಂಡಿಕಾ ಕಾರಿನಲ್ಲಿ 20 ಲಕ್ಷ ರೂ. ಪತ್ತೆ

ಚಿಕ್ಕಬಳ್ಳಾಪುರ: ಚುನಾವಣೆ ಸಮೀಪದಲ್ಲಿರುವಾಗಲೇ ಚೆಕ್​ಪೋಸ್ಟ್​ ಸೇರಿದಂತೆ ಎಲ್ಲಾ ಕಡೆಗಳಲ್ಲಿಯೂ ಪೊಲೀಸರು ನಿಗಾವಹಿಸಿದ್ದಾರೆ. ಇದೀಗ ಗೌರಿಬಿದನೂರು ತಾಲೂಕಿನ ಹುದುಗೂರು ಗ್ರಾಮದಲ್ಲಿ ಇಂಡಿಕಾ ಕಾರಿನಲ್ಲಿ ಸಿಕ್ಕಿದ 20 ಲಕ್ಷ ರೂಪಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಇಂಡಿಕಾ ಕಾರನ್ನು ತಡೆದು ಪರಿಶೀಲನೆ ನಡೆಸಿದ್ದರು. ಈ ಸಂದರ್ಭ ಕಾರಿನಲ್ಲಿ ನಗದು ಸಾಗಿಸುತ್ತಿರುವುದು ಗಮನಕ್ಕೆ ಬಂದಿದೆ. ಕಾರನ್ನು ಪರಿಶೀಲಿಸಿದ ಪೊಲೀಸರು ನಗದು ವಶಕ್ಕೆ ಪಡೆದಿದ್ದಾರೆ. ನಗದು ವಶಪಡಿಸಿರುವ ಬಗ್ಗೆ ಪೊಲೀಸರು ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧ ಚುನಾವಣಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

RELATED ARTICLES

Related Articles

TRENDING ARTICLES