ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್ ಮೂಲಕ ದೇಶದ ಜನರಿಗೆ ಚಾಂದ್ರಮಾನ ಯುಗಾದಿಯ ಶುಭಾಶಯಗಳನ್ನು ತಿಳಿಸಿದ್ದಾರೆ. ಕನ್ನಡದಲ್ಲಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ ಅವರು “ಹೊಸ ವರ್ಷದ ಶುಭ ಸಂದರ್ಭದಲ್ಲಿ ಎಲ್ಲರ ಕನಸುಗಳು ನನಸಾಗಲಿ” ಎಂದು ಹಾರೈಸಿದ್ದಾರೆ.
“ಎಲ್ಲರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು! ಹೊಸ ವರ್ಷದ ಶುಭ ಸಂದರ್ಭದಲ್ಲಿ ನಿಮ್ಮ ಎಲ್ಲ ಕನಸುಗಳು ನನಸಾಗಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ನಿಮಗೆಲ್ಲ ಸಂತೋಷ ಮತ್ತು ಉತ್ತಮ ಆರೋಗ್ಯ ಲಭಿಸಲಿ ಎಂದು ನಾನು ಆಶಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
ಎಲ್ಲರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು!
ಹೊಸ ವರ್ಷದ ಶುಭ ಸಂದರ್ಭದಲ್ಲಿ ನಿಮ್ಮ ಎಲ್ಲ ಕನಸುಗಳು ನನಸಾಗಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ನಿಮಗೆಲ್ಲ ಸಂತೋಷ ಮತ್ತು ಉತ್ತಮ ಆರೋಗ್ಯ ಲಭಿಸಲಿ ಎಂದು ನಾನು ಆಶಿಸುತ್ತೇನೆ.
— Narendra Modi (@narendramodi) April 6, 2019