Sunday, December 22, 2024

ಹಿನ್ನೆಲೆ ಗಾಯಕ ವಿಜಯ ಪ್ರಕಾಶ್ ತಂದೆ ವಿಧಿವಶ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕ ವಿಜಯ ಪ್ರಕಾಶ್ ಅವರ ತಂದೆ, ಕರ್ನಾಟಕ ಶಾಸ್ತ್ರೀಯ ಸಂಗೀತ ಕಲಾವಿದ ವಿದ್ವಾನ್​ ಎಲ್. ರಾಮಶೇಷ ಅವರು ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯ್​ ಪ್ರಕಾಶ್ ಅವರ ತಂದೆ ಎಲ್.ರಾಮಶೇಷ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ರಾಮಶೇಷ ಅವರಿಗೆ 72 ವರ್ಷ ವಯಸ್ಸಾಗಿತ್ತು. ಪುತ್ರ ವಿಜಯಪ್ರಕಾಶ್ ಅಮೇರಿಕಾದಿಂದ ಆಗಮಿಸಬೇಕಿದ್ದು ಮಂಗಳವಾರ ಅಂತ್ಯಸಂಸ್ಕಾರ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಚಾಮುಂಡಿ ಬೆಟ್ಟದ ತಪ್ಪಲಿನ‌ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

RELATED ARTICLES

Related Articles

TRENDING ARTICLES