ಲಂಡನ್: ಭಾರತಕ್ಕೆ ತಮ್ಮನ್ನು ಹಸ್ತಾಂತರಿಸುವುದನ್ನು ಪ್ರಶ್ನಿಸಿ ಉದ್ಯಮಿ ವಿಜಯ್ ಮಲ್ಯ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ಬ್ರಿಟನ್ ಕೋರ್ಟ್ ತಿರಸ್ಕರಿಸಿದೆ. ಕಳೆದ ವರ್ಷ ಡಿಸೆಂಬರ್ 9ರಂದು ಮಲ್ಯ ಅವರನ್ನು ಭಾರತಕ್ಕೆ ಗಡಿಪಾರು ಮಾಡಲು ಬ್ರಿಟನ್ ಕೋರ್ಟ್ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಮಲ್ಯ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಮಲ್ಯ ಸಲ್ಲಿಸಿರೋ ಅರ್ಜಿ ತಿರಸ್ಕೃತವಾಗಿದ್ದು, ಭಾರತದ ಪ್ರಯತ್ನಕ್ಕೆ ದೊಡ್ಡ ಯಶಸ್ಸು ದೊರೆತಂತಾಗಿದೆ. ಮುಂದಿನ ದಿನಗಳಲ್ಲಿ ಮಲ್ಯ ಅವರು ಮೌಖಿಕ ವಿಚಾರಣೆಯನ್ನು ಎದುರಿಸಲಿದ್ದಾರೆ.