ಬೆಂಗಳೂರು : ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧವೇ ಐಟಿ ಅಧಿಕಾರಿಗಳು ದೂರು ನೀಡಿದ್ದಾರೆ.
ತಮ್ಮ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಐಟಿ ಅಧಿಕಾರಿಗಳು ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಸಿಎಲ್ಪಿ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಕಂಪ್ಲೇಂಟ್ ನೀಡಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.
ಮಂಡ್ಯ, ಹಾಸನ, ಮೈಸೂರು ಭಾಗಗಳಲ್ಲಿ ದಾಳಿ ನಡೆಸಿದ್ವಿ. ಕುಮಾರಸ್ವಾಮಿ, ಪರಮೇಶ್ವರ್, ಸಿದ್ದರಾಮಯ್ಯ ಮೊದಲಾದ ನಾಯಕರು ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ ಅಂತ ದೂರು ನೀಡಿರೋ ಐಟಿ ಅಧಿಕಾರಿಗಳು ಐಪಿಸಿ ಸೆಕ್ಷನ್ 143,149, 504, 505, 506,186,187,189ರ ಅಡಿ ಕ್ರಮಕ್ಕೆ ಮನವಿ ಮಾಡಿದ್ದಾರೆ.