ಮಂಡ್ಯ : ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಾಮಪತ್ರ ಸಲ್ಲಿಕೆ ವಿಷಯದಲ್ಲಿ ಹಸ್ತಕ್ಷೇಪ, ಚುನಾವಣೆಯಲ್ಲಿ ಪಕ್ಷಪಾತ ಆರೋಪದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ,
ನಿಖಿಲ್ ನಾಮಪತ್ರ ಸಲ್ಲಿಕೆ ವಿಚಾರದಲ್ಲಿ ಡಿಸಿ ಹಸ್ತಕ್ಷೇಪ ಮಾಡಿದ್ದಾರೆ ಅಂತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಅವರನ್ನು ವರ್ಗಾವಣೆ ಮಾಡಿದ್ದು, ಸ್ಥಳ ನಿಗಧಿ ಪಡಿಸಿಲ್ಲ. ಮಂಡ್ಯಗೆ ನೂತನ ಡಿಸಿಯಾಗಿ ಪಿ.ಸಿ ಜಾಫರ್ ಅವರನ್ನು ನೇಮಕ ಮಾಡಲಾಗಿದೆ.