Friday, September 13, 2024

ಮತದಾರರ ಪಟ್ಟಿಯಲ್ಲಿ ನಿಖಿಲ್ ಹೆಸರಿಲ್ಲ..!

ಬೆಂಗಳೂರು: ಮತದಾರರ ಪಟ್ಟಿಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರಿಲ್ಲದಿರುವ ಹಿನ್ನೆಲೆ ಸಾಮಾಜಿಕ ಕಾರ್ಯಕರ್ತ ಬಿ.ಎಸ್.ಗೌಡ ಅವರು ಪ್ರಾದೇಶಿಕ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಲೋಕಸಭಾ ಚುನಾವಣೆ ಸಮೀಪಿಸಿದ್ದು, ಮತದಾರರ ಪಟ್ಟಿಯಲ್ಲಿ ನಿಖಿಲ್ ಕುಮಾರಸ್ವಾಮಿ ಹೆಸರು ನಾಪತ್ತೆಯಾಗಿದೆ. ಈ ಬಗ್ಗೆ ಬಿ. ಎಸ್. ಗೌಡ​ ದೂರು ನೀಡಿದ್ದಾರೆ. ದೂರನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಾದೇಶಿಕ ಆಯುಕ್ತರು ಸಾಮಾಜಿಕ ಕಾರ್ಯಕರ್ತ ಬಿ.ಎಸ್.ಗೌಡ ದೂರನ್ನಾಧರಿಸಿ ಕ್ರಮ‌ ಕೈಗೊಳ್ಳಲಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಿ, ವರದಿ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ಆಯುಕ್ತರು ಸೂಚನೆ ನೀಡಿದ್ದಾರೆ. ಇಂದೇ ಪರಿಶೀಲನೆಗೆ ಮುಹೂರ್ತ ಫಿಕ್ಸ್ ಮಾಡಿ ಆದೇಶ ನೀಡಲಾಗಿದೆ. ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪರಿಶೀಲನೆ ನಡೆಯಲಿದೆ. ಪರಿಶೀಲನೆ ವೇಳೆ ದೂರುದಾರ ಬಿ. ಎಸ್. ಗೌಡ ಅವರೂ​ ಹಾಜರಿರುವಂತೆ ಸೂಚನೆ ನೀಡಲಾಗಿದೆ.

RELATED ARTICLES

Related Articles

TRENDING ARTICLES