Monday, April 22, 2024

ಪರಮೇಶ್ವರ್ ನಾಯ್ಕ್​​ ಕಾರಿನ ಮೇಲೆ ಕಲ್ಲು ತೂರಾಟ..!

ಕಲಬುರಗಿ : ಸಚಿವ ಪಿ.ಟಿ ಪರಮೇಶ್ವರ ನಾಯ್ಕ್​ ಅವರ ಕಾರಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರೋ ಘಟನೆ ಚಿತ್ತಾಪುರ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಘಟನೆಯಲ್ಲಿ ಪರಮೇಶ್ವರ್​ ನಾಯ್ಕ್​ ಅವರ ಕಾರಿನ ಗಾಜು ಪುಡಿ ಪುಡಿಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಪರ ಪರಮೇಶ್ವರ್ ನಾಯ್ಕ್​ ಅವರು ಚಿತ್ತಾಪುರಕ್ಕೆ ತೆರಳಿದ್ದರು. ಈ ವೇಳೆ ಕಲ್ಲು ತೂರಾಟ ನಡೆಸಲಾಗಿದೆ. ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಅವರ ಬೆಂಬಲಿಗರು ಈ ಕಿಡಿಗೇಡಿ ಕೃತ್ಯ ಎಸಗಿರೋದು ಎಂದು ಹೇಳಲಾಗುತ್ತಿದೆ.
ಸಚಿವ ಕಾರಿಗೆ ಕಲ್ಲು ತೂರಾಟ ನಡೆಸಿರೋದಲ್ಲದೆ ಕಾರಿಗೆ ಮುತ್ತಿಗೆ ಹಾಕಿ ಗೋ ಬ್ಯಾಕ್​ ನಾಯಕ್ ಎಂದು ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆಯನ್ನೂ ನಡೆಸಲಾಗಿದೆ.

RELATED ARTICLES

Related Articles

TRENDING ARTICLES