Monday, December 23, 2024

ಚರ್ಚೆಗೆ ಸಿದ್ಧ – ನಿಖಿಲ್ ಸವಾಲು ಸ್ವೀಕರಿಸಿದ ಸುಮಲತಾ

ಮಂಡ್ಯ: ಅಭಿವೃದ್ಧಿ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ ಅಂತ ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಸವಾಲು ಸ್ವೀಕರಿಸಿದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು”ಮಂಡ್ಯ ಅಭಿವೃದ್ಧಿ ಬಗ್ಗೆ ಚರ್ಚಿಸಲು ನಾನು ಸಿದ್ಧಳಿದ್ದೇನೆ. ಟೀಕೆ ಮಾಡುವಾಗ ಮಂಡ್ಯ ಅಭಿವೃದ್ಧಿ ನೆನಪಾಗಲಿಲ್ವ? ಈಗ ಮಂಡ್ಯ ಅಭಿವೃದ್ಧಿ ಬಗ್ಗೆ ಮಾತನಾಡುತ್ತಾರೆ. ಜೆಡಿಎಸ್ ನಾಯಕರ ಹೇಳಿಕೆಗಳನ್ನು ಜನ ಕೇಳಿದ್ದಾರೆ. ಈಗ ಅಭಿವೃದ್ಧಿ ಬಗ್ಗೆ ಮಾತನಾಡಿದ್ರೆ ಜನ ನಂಬಲ್ಲ” ಅಂತ ಹೇಳಿದ್ದಾರೆ.

ಇಂದು ಬೆಳಗ್ಗೆ ನಿಖಿಲ್​ ಕುಮಾರಸ್ವಾಮಿ ಅವರು ಮಂಡ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸಲು ಬರುವಂತೆ ಸುಮಲತಾ ಅವರಿಗೆ ಸವಾಲೆಸೆದಿದ್ದರು. ಇದೀಗ ಸುಮಲತಾ ಅವರು ಸವಾಲು ಸ್ವೀಕರಿಸಿದ್ದು, ಅಭಿವೃದ್ಧಿ ಬಗ್ಗೆ ಚರ್ಚಿಸಲು ಸಿದ್ಧವಿರುವುದಾಗಿ ಹೇಳಿದ್ದಾರೆ.

RELATED ARTICLES

Related Articles

TRENDING ARTICLES