Tuesday, June 18, 2024

ಸಿಎಂ ಕಾರಿಗೆ ಬೆಂಕಿ

ಮಂಡ್ಯ: ಸಿಎಂ ಪ್ರಯಾಣಿಸುತ್ತಿದ್ದ ರೇಂಜ್ ರೋವರ್ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಶ್ರೀರಂಗಪಟ್ಟಣದ ಪೀಹಳ್ಳಿ ಗ್ರಾಮದ ಸಮೀಪ ಬುಧವಾರ ರಾತ್ರಿ ಘಟನೆ ನಡೆದಿದ್ದು, ಅಪಾಯಗಳಿಲ್ಲದೆ ಸಿಎಂ ಕುಮಾರಸ್ವಾಮಿ ಅವರು ಪಾರಾಗಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪುತ್ರ ನಿಖಿಲ್​ ಕುಮಾರಸ್ವಾಮಿ ಪರ ಪ್ರಚಾರ ನಡೆಸಿದ ಸಿಎಂ ರಾತ್ರಿ ತಂಗಲು ಕೆಆರ್​ಎಸ್​ನ ಖಾಸಗಿ ಹೋಟೆಲ್​​ ಕಡೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಂಜಿನ್​ ಬಿಸಿಯಾಗಿ ಹೊಗೆ ಕಾಣಿಸಿಕೊಂಡು ನಂತರ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಭದ್ರತಾ ಸಿಬ್ಬಂದಿ ಸಿಎಂ ಅವರನ್ನು ಬೇರೆ ಕಾರಿನಲ್ಲಿ ಕಳುಹಿಸಿದ್ದಾರೆ.

RELATED ARTICLES

Related Articles

TRENDING ARTICLES