Thursday, November 7, 2024

ಮೈತ್ರಿ ಅಭ್ಯರ್ಥಿ ರಿಜ್ವಾನ್ ಆಪ್ತರ ಮನೆಗೆ ಐಟಿ ದಾಳಿ

ಬೆಂಗಳೂರು: ರಾಜ್ಯದಲ್ಲಿ ಮೇಲಿಂದ ಮೇಲೆ ಐಟಿ ದಾಳಿ ನಡೆಯುತ್ತಿದ್ದು, ಇಂದು ಬೆಂಗಳೂರಿನಲ್ಲಿ ಮತ್ತೆ ಐಟಿ ದಾಳಿ ನಡೆದಿದೆ. ಮೂವರು ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 100ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ಬೆಂಗಳೂರಿನ 20ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಉದ್ಯಮಿಗಳಾದ ಅಮಾನುಲ್ಲಾ ಖಾನ್​​​, ಕಮಲ್​ ಪಾಷಾ, ನಯೀಜ್​ ಖಾನ್ ಮನೆ​ ಮೇಲೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಶೀಲಿಸಿದ್ದಾರೆ. ಈ ಮೂವರೂ ಬೆಂಗಳೂರು ಕೇಂದ್ರದ ಮೈತ್ರಿ ಅಭ್ಯರ್ಥಿ ರಿಜ್ವಾನ್​ ಅರ್ಷದ್​ ಅವರ ಆಪ್ತರಾಗಿದ್ದಾರೆ.

RELATED ARTICLES

Related Articles

TRENDING ARTICLES