ನವದೆಹಲಿ: ಸರ್ಟಿಫೈ ಆಗದ ಯಾವುದೇ ರಾಜಕೀಯ ವಿಚಾರಗಳನ್ನು ನಮೋ ಟಿವಿಯಲ್ಲಿ ಪ್ರಸಾರ ಮಾಡುವುದಕ್ಕೆ ಚುನಾವಣಾ ಆಯೋಗ ತಡೆಯೊಡ್ಡಿದೆ. ಪಕ್ಷ ಸಂಬಂಧಿತ ವಿಚಾರಗಳು ಹಾಗೂ ಪ್ರಧಾನಿ ಮೋದಿ ಅವರ ಭಾಷಣವನ್ನು ಪ್ರಸಾರ ಮಾಡುವ 24*7 ಚಾನೆಲ್ ನಮೋ ಟಿವಿಯಲ್ಲಿ ರಾಜಕೀಯ ಸಂಬಂಧಿತ ವಿಚಾರಗಳನ್ನು ಪ್ರಸಾರ ಮಾಡಬಾರದು ಎಂದು ಚುನಾವಣಾ ಆಯೋಗ ತಿಳಿಸಿದೆ. ಈ ಬಗ್ಗೆ ಚುನಾವಣಾ ಆಯೋಗ ದೆಹಲಿಯ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ, ರಾಜಕೀಯ ಪ್ರಚಾರ ನೀಡುವಂತಹ ಯಾವುದೇ ವಿಷಯಗಳನ್ನು ಒಪ್ಪಿಗೆ ಇಲ್ಲದೆ ಪ್ರಸಾರ ಮಾಡಬಾರದು ಎಂದು ಚುನಾವಣಾ ಆಯೋಗ ಪತ್ರದಲ್ಲಿ ಸೂಚನೆ ನೀಡಿದೆ. ರಾಜಕೀಯ ಪಕ್ಷಗಳೇ ನಮೋ ಟಿವಿಯಲ್ಲಿ ಪ್ರಸಾರವಾಗುವ ವಿಚಾರಗಳ ಪ್ರಾಯೋಜಕತ್ವವನ್ನು ವಹಿಸುವುದರಿಂದ ಪ್ರಸಾರವಾಗುವ ವಿಚಾರಗಳ ಬಗ್ಗೆ ಎಚ್ಚರ ವಹಿಸಬೇಕೆಂದು ತಿಳಿಸಿದೆ.