ಮಂಗಳೂರು: ಸತತ 2ನೇ ದಿನವೂ ಕರುನಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತಬೇಟೆ ನಡೆಸಲಿದ್ದಾರೆ. ಮಂಗಳೂರಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮೋದಿ ಮತಯಾಚಿಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ನಗರದ ನೆಹರೂ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಮೋದಿ ಆಗಮನ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಭಾರಿ ಬಿಗಿಭದ್ರತೆ ಏರ್ಪಡಿಸಲಾಗಿದೆ. ರೈಲ್ವೇ ನಿಲ್ದಾಣ, ಏರ್ಪೋರ್ಟ್ ಸೇರಿ ನಗರದೆಲ್ಲೆಡೆ ಭದ್ರತೆ ಒದಗಿಸಲಾಗಿದೆ. ನಗರದ ಲಾಡ್ಜ್ಗಳಲ್ಲಿ ವಾಸ್ತವ್ಯ ಹೂಡಿದವರ ಬಗ್ಗೆ ಮಾಹಿತಿ ಕಲೆ ಹಾಕಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರಲ್ಲಿ ಹಲವು ಬಸ್ ಮಾರ್ಗಗಳ ಬದಲಾವಣೆ ಮಾಡಲಾಗಿದೆ. ಮೈದಾನದ ಸುತ್ತಲೂ ಸಿಸಿ ಕ್ಯಾಮೆರಾ ಕಣ್ಗಾವಲು, 5 ಕೆಎಸ್ಆರ್ಪಿ ತುಕಡಿ ನಿಯೋಜಿಸಲಾಗಿದೆ.