Monday, December 23, 2024

ಮೋದಿಯವರಿಂದ ನೀತಿ ಪಾಠ ಕಲಿಯಬೇಕಿಲ್ಲ: ಸಿಎಂ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರಿಂದ ನಾನು ನೀತಿ ಪಾಠ ಕಲಿಯಬೇಕಿಲ್ಲ ಅಂತ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಬೆಂಗಳೂರಿನಲ್ಲಿ ಹೇಳಿದ್ದಾರೆ. ಪ್ರಧಾನಿ ಮೋದಿ ಬಗ್ಗೆ ಮಾತನಾಡಿದ ಸಿಎಂ, “ಮೋದಿಗೆ ಪರ್ಸೆಂಟೇಜ್ ಬಿಟ್ಟು ಬೇರೇನೂ ಗೊತ್ತಿಲ್ಲ. ಅವರು ಪರ್ಸೆಂಟೇಜ್ ಆಧಾರದಿಂದಲೇ ಬಂದಿರೋದು. ನಾನು ಐಟಿಗೆ ಭಯ ಬಿದ್ದಿಲ್ಲ. ಮೋದಿಯವರ ಲೆವೆಲ್​ಗೆ ನಾನು ಇಳಿದಿಲ್ಲ ಎಂದಿದ್ದಾರೆ. ಲೋಕಸಭಾ ಚುನಾವಣೆ ಸಮೀಪಿಸಿದ್ದು, ರಾಜಕೀಯ ಮುಖಂಡರು ಪರಸ್ಪರ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಅವರೂ ನಿನ್ನೆ ಕೋಲಾರ, ಚಿತ್ರದುರ್ಗ, ಕೆ. ಆರ್ ನಗರದಲ್ಲಿ ಪ್ರಚಾರ ನಡೆಸಿದ್ದರು. ಪ್ರಧಾನಿ ಮೋದಿ ಅವರೂ ಕರಾವಳಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು.

RELATED ARTICLES

Related Articles

TRENDING ARTICLES