ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ದ್ವಿತೀಯ, ಕೊಡಗು ತೃತೀಯ ಸ್ಥಾನದಲ್ಲಿವೆ. ರೀಕ್ಷೆಯಲ್ಲಿ ಶೇ. 61.73 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ರಾಜ್ಯದ ಬರೋಬ್ಬರಿ 98 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. 15 ಸರ್ಕಾರಿ ಕಾಲೇಜುಗಳಲ್ಲಿ ಶೇ.100 ಫಲಿತಾಂಶ ಬಂದಿದೆ. ಕಳೆದ ಬಾರಿಗಿಂತ ಶೇ.2.17ರಷ್ಟು ಫಲಿತಾಂಶ ಹೆಚ್ಚಳವಾಗಿದೆ.
ಕಲಾ ವಿಭಾಗದಲ್ಲಿ ಶೇ.50.53, ವಾಣಿಜ್ಯ ವಿಭಾಗದಲ್ಲಿ ಶೇ.66.39, ವಿಜ್ಞಾನ ವಿಭಾಗದಲ್ಲಿ ಶೇ. 66.58 ಫಲಿತಾಂಶ ಬಂದಿದೆ.
ಕಲಾವಿಭಾಗದಲ್ಲಿ ಬಳ್ಳಾರಿ ಜಿಲ್ಲೆಯ ಕೊಟ್ಟೂರಿನ ಇಂದು ಕಾಲೇಜು ವಿದ್ಯಾರ್ಥಿನಿ ಕುಸುಮಾ ಉಜ್ಜನಿ (594), ವಿಜ್ಞಾನ ವಿಭಾಗದಲ್ಲಿ ಬೆಂಗಳೂರಿನ ಕುಮಾರನ್ಸ್ ಕಾಂಪೋಸಿಟ್ ಕಾಲೇಜಿನ ವಿದ್ಯಾರ್ಥಿ ರಜತ್ ಕಶ್ಯಪ್ (594), ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಆಳ್ವಾಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಒಲ್ವಿತಾ ಆ್ಯಂಜಿಲ್ಲಾ ಡಿಸೋಜಾ (596) ಪ್ರಥಮ ಸ್ಥಾನ ಪಡೆದಿದ್ದಾರೆ. ವಿಶೇಷವೆಂದರೆ ಕಲಾವಿಭಾಗದಲ್ಲಿನ ಟಾಪ್ 10 ಸ್ಥಾನಗಳಲ್ಲಿ ಬಳ್ಳಾರಿಯ ಇಂದು ಕಾಲೇಜಿನ ವಿದ್ಯಾರ್ಥಿಗಳೇ ಇದ್ದಾರೆ.