Monday, November 4, 2024

ಪ್ರಜ್ವಲ್ ರೇವಣ್ಣ ವಿರುದ್ಧ ಎಫ್​ಐಆರ್​ ದಾಖಲು

ಮೈಸೂರು: ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಸಚಿವ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ಧ ಹಳ್ಳಿ ಮೈಸೂರು ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಏ. 7ರಂದು ಸಮುದಾಯವೊಂದನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದ ಸಂದರ್ಭ, ಜಾತಿಯಾಧಾರಿಸಿ‌ ಮತದಾನ ಮಾಡಲು ಸೂಚನೆ ನೀಡಿರುವ ಆರೋಪದಲ್ಲಿ ಕೇಸು ದಾಖಲಿಸಲಾಗಿದೆ.

ಲೋಕಸಭಾ ಚುನಾವಣೆಗೆ ಬೆರಳೆಣಿಕೆಯ ದಿನಗಳಷ್ಟೇ ಬಾಕಿ ಇದ್ದು, ಹಾಸನದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್​ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದರೆ, ಬಿಜೆಪಿಯಿಂದ ಎ. ಮಂಜು ಸ್ಪರ್ಧಿಸುತ್ತಿದ್ದಾರೆ. ಈಗಾಗಲೇ ಮೈತ್ರಿ ಪಕ್ಷದ ವರಿಷ್ಠರು ಕ್ಷೇತ್ರದಲ್ಲಿ ಪ್ರಚಾರ ನಡೆಸಿ, ಪ್ರಜ್ವಲ್ ಪರ ಮತ ಯಾಚಿಸಿದ್ದಾರೆ.

RELATED ARTICLES

Related Articles

TRENDING ARTICLES