ಯಾದಗಿರಿ : ದೇಶಕ್ಕಾಗಿ ಬಿಜೆಪಿಯ ಒಂದು ನಾಯಿಯೂ ಸತ್ತಿಲ್ಲ ಅಂತ ಕಾಂಗ್ರೆಸ್ನ ಹಿರಿಯ ನಾಯಕ, ರಾಜಕೀಯ ಮುತ್ಸದ್ಧಿ, ಸಂಸದ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಯಾದಗಿರಿಯ ಕೊಂಕಲ್ನಲ್ಲಿ ಭಾಷಣದ ಅಬ್ಬರದ ನಡುವೆ ಖರ್ಗೆಯವರು ಮನಸೋ ಇಚ್ಛೆ ಮಾತನಾಡಿದ್ದಾರೆ. ”ದೇಶದ ಸ್ವಾತಂತ್ರ್ಯದ ಬಗ್ಗೆ ಮೋದಿಗಿಂತ ಹೆಚ್ಚು ನನಗೆ ಗೊತ್ತು. ವಯಸ್ಸಿನಲ್ಲಿ ನನಗಿಂತ ಮೋದಿ ಚಿಕ್ಕವನು. ಸ್ವಾತಂತ್ರ್ಯ ಬಂದಾಗ ಮೋದಿ ಹುಟ್ಟಿರಲಿಲ್ಲ, ನಾನು ಹುಟ್ಟಿದ್ದೆ..! ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರೇ ಕಾಂಗ್ರೆಸ್ನವರು. ಆದರೆ, ದೇಶಕ್ಕಾಗಿ ಬಿಜೆಪಿಯ ಒಂದು ನಾಯಿಯೂ ಸತ್ತಿಲ್ಲ. ಇಂಥವರು ನಮಗೆ ದೇಶಭಕ್ತಿಯ ಪಾಠ ಮಾಡುತ್ತಾರೆ” ಎಂದು ಮಲ್ಲಿಕಾರ್ಜುನ ಖರ್ಗೆ ಅವರು ನಾಲಗೆ ಹರಿಬಿಟ್ಟಿದ್ದಾರೆ.