Thursday, December 26, 2024

ಮೋದಿ ಬಯೋಪಿಕ್ ವೀಕ್ಷಿಸಿ ಅಭಿಪ್ರಾಯ ತಿಳಿಸಿ : ಚುನಾವಣಾ ಆಯೋಗಕ್ಕೆ ಸುಪ್ರೀಂ ಆದೇಶ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಸಿನಿಮಾವಾದ ‘ಪಿಎಂ ನರೇಂದ್ರ ಮೋದಿ’ ಚಿತ್ರವನ್ನು ವೀಕ್ಷಣೆ ಮಾಡಿ ತನ್ನ ಅಭಿಪ್ರಾಯವನ್ನು ತಿಳಿಸುವಂತೆ ಸುಪ್ರೀಂಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿದೆ.
ವಿವೇಕ್ ಒಬೆರಾಯ್​ ಅಭಿನಯದ ‘ಪಿಎಂ ನರೇಂದ್ರ ಮೋದಿ’ ಚಿತ್ರವನ್ನು ಎಲೆಕ್ಷನ್ ಮುಗಿಯುವ ತನಕ ಬಿಡುಗಡೆ ಮಾಡಬಾರದು ಅಂತ ಚುನಾವಣಾ ಆಯೋಗ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಚಿತ್ರತಂಡ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಇಂದು ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್​​​ ಸಿನಿಮಾವನ್ನು ವೀಕ್ಷಣೆ ಮಾಡಿ ಏಪ್ರಿಲ್ 19ರೊಳಗಾಗಿ ಮುಚ್ಚಿದ ಲಕೋಟೆಯಲ್ಲಿ ತನ್ನ ಅಭಿಪ್ರಾಯವನ್ನು ತಿಳಿಸಬೇಕು ಅಂತ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಏಪ್ರಿಲ್​ 22ರಂದು ವಿಚಾರಣೆಯನ್ನು ಕೈಗೆತ್ತಿಕೊಳ್ಳಲಾಗುತ್ತದೆ ಎಂದು ತಿಳಿಸಿದೆ. ಮುನ್ನ ಚುನಾವಣೆ ವೇಳೆ ಕಣದಲ್ಲಿರುವ ಅಭ್ಯರ್ಥಿ ಕುರಿತ ಚಿತ್ರ ಪ್ರದರ್ಶಿಸುವಂತಿಲ್ಲ. ಇದು ಮತದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಆಯೋಗ ಹೇಳಿತ್ತು.

 

RELATED ARTICLES

Related Articles

TRENDING ARTICLES