ಭೋಪಾಲ್: ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಖುಲಾಸೆಯಾಗಿದ್ದ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. “ನಾನು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ. ಈ ಚುನಾವಣೆಯಲ್ಲಿ ಸ್ಪರ್ಧಿಸಿ ಖಂಡಿತಾ ಗೆಲುವು ಸಾಧಿಸುತ್ತೇನೆ” ಅಂತ ಪ್ರಜ್ಞಾ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ, ಕಾಂಗ್ರೆಸ್ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಪ್ರಜ್ಞಾ ಸಿಂಗ್ ಸ್ಪರ್ಧೆ ಮಾಡಲಿದ್ದಾರೆ. “ಇದು ಧರ್ಮ, ಅಧರ್ಮಗಳ ಮಧ್ಯೆ ನಡೆಯುವ ಚುನಾವಣೆ ಕದನ” ಎಂದು ಪ್ರಜ್ಞಾ ಸಿಂಗ್ ಹೇಳಿದ್ದಾರೆ.
ಸಂಸದ ಅಲೋಕ್ ಸಂಜರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, “ಪ್ರಜ್ಞಾ ಸಿಂಗ್ ಅವರನ್ನು ಪಕ್ಷ ಸಂಪೂರ್ಣವಾಗಿ ಬೆಂಬಲಿಸಲಿದೆ. ಅವರ ವಿರುದ್ಧ ಇದ್ದಂತಹ ಆರೋಪಗಳು ಯಾವುದೂ ಸಾಬೀತಾಗಿಲ್ಲ. ಮಹಿಳೆಯ ಮೇಲೆ ದೌರ್ಜನ್ಯವಾಗಿದೆ. ಈಗ ಅದಕ್ಕೆ ಉತ್ತರಿಸುವ ಸಮಯ ಬಂದಿದೆ” ಎಂದಿದ್ದಾರೆ.