Monday, November 4, 2024

ಸಾಧ್ವಿ ಪ್ರಜ್ಞಾ ಸಿಂಗ್ ಬಿಜೆಪಿಗೆ ಸೇರ್ಪಡೆ

ಭೋಪಾಲ್: ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಖುಲಾಸೆಯಾಗಿದ್ದ ಸಾಧ್ವಿ ಪ್ರಜ್ಞಾ ಸಿಂಗ್​ ಠಾಕೂರ್​ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. “ನಾನು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ. ಈ ಚುನಾವಣೆಯಲ್ಲಿ ಸ್ಪರ್ಧಿಸಿ ಖಂಡಿತಾ ಗೆಲುವು ಸಾಧಿಸುತ್ತೇನೆ” ಅಂತ ಪ್ರಜ್ಞಾ ಸಿಂಗ್​ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ, ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಪ್ರಜ್ಞಾ ಸಿಂಗ್ ಸ್ಪರ್ಧೆ ಮಾಡಲಿದ್ದಾರೆ. “ಇದು ಧರ್ಮ, ಅಧರ್ಮಗಳ ಮಧ್ಯೆ ನಡೆಯುವ ಚುನಾವಣೆ ಕದನ” ಎಂದು ಪ್ರಜ್ಞಾ ಸಿಂಗ್ ಹೇಳಿದ್ದಾರೆ.

ಸಂಸದ ಅಲೋಕ್ ಸಂಜರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, “ಪ್ರಜ್ಞಾ ಸಿಂಗ್ ಅವರನ್ನು ಪಕ್ಷ ಸಂಪೂರ್ಣವಾಗಿ ಬೆಂಬಲಿಸಲಿದೆ. ಅವರ ವಿರುದ್ಧ ಇದ್ದಂತಹ ಆರೋಪಗಳು ಯಾವುದೂ ಸಾಬೀತಾಗಿಲ್ಲ. ಮಹಿಳೆಯ ಮೇಲೆ ದೌರ್ಜನ್ಯವಾಗಿದೆ. ಈಗ ಅದಕ್ಕೆ ಉತ್ತರಿಸುವ ಸಮಯ ಬಂದಿದೆ” ಎಂದಿದ್ದಾರೆ.

RELATED ARTICLES

Related Articles

TRENDING ARTICLES