ಮಂಡ್ಯ : ಸ್ಟಾರ್ವಾರ್ಗೆ ವೇದಿಕೆ ಆಗಿರುವ ಸಕ್ಕರೆ ನಾಡು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಆಣೆ ಪ್ರಮಾಣದ ರಾಜಕೀಯ, ಬ್ಲಾಕ್ಮೇಲ್ ತಂತ್ರ ಶುರುವಾಯ್ತಾ ಅನ್ನೋ ಪ್ರಶ್ನೆ ಮೂಡುತ್ತಿದೆ.
ನಿಖಿಲ್ ಕುಮಾರಸ್ವಾಮಿ ಅವರ ಮಾದರಿ ಬ್ಯಾಲೆಟ್ ಪೇಪರ್ ಇಟ್ಟು ಮತದಾರರಿಂದ ಆಣೆ ಮಾಡಿಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ. ಅದಕ್ಕೆ ತಕ್ಕಂತೆ ಫೋಟೋಗಳು ವೈರಲ್ ಆಗುತ್ತಿವೆ. ಕಡೇ ದಿನ ಮತದಾರರನ್ನು ಕಟ್ಟಿಹಾಕಲು ಜೆಡಿಎಸ್ ಪ್ರಮಾಣದ ಗಿಮಿಕ್ಸ್ ಮಾಡುತ್ತಿದೆಯೇ ಅನ್ನೋ ಪ್ರಶ್ನೆ ಮೂಡಿದೆ.
ಮಂಡ್ಯ ರಣಕಣದಲ್ಲಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮೈತ್ರಿ ಕಲಿಯಾಗಿ ಕಣದಲ್ಲಿದ್ದಾರೆ. ಅವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ‘ರಣಕಹಳೆ’ ಊದಿದ್ದಾರೆ.