ರಾಯಚೂರು : ಮಧು ಪತ್ತಾರ್ ಅವರದ್ದು ಆತ್ಮಹತ್ಯೆಯಲ್ಲ, ಅದು ರೇಪ್ ಅಂಡ್ ಮರ್ಡರ್. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು, ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಸೋಶಿಯಲ್ ಮೀಡಿಯಾದಲ್ಲಿ ‘ಜಸ್ಟಿಸ್ ಫಾರ್ ಮಧು’ ಅಭಿಯಾನ ಆರಂಭಿಸಲಾಗಿದೆ.
ರಾಯಚೂರಿನ ನವೋದಯ ಇಂಜಿನಿಯರಿಂಗ್ ಕಾಲೇಜಿನ ಮಧು ಪತ್ತಾರ್ ಕಳೆದ ಶನಿವಾರದಿಂದ ಕಾಣೆಯಾಗಿದ್ದರು. ಮಾಣಿಕ ಪ್ರಭು ದೇವಸ್ಥಾನದ ಹಿಂಭಾಗದ ಗುಡ್ಡದಲ್ಲಿ ಮಂಗಳವಾರ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ನನ್ನ ಸಾವಿಗೆ ನಾನೇ ಕಾರಣ ಅಂತ ಬರೆದಿದ್ದ ಡೆತ್ ನೋಟ್ ಸಿಕ್ಕಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆಕೆಯ ತಾಯಿ ರೇಣುಕಾದೇವಿ ನೇತಾಜಿನಗರ ಪೊಲೀಸ್ ಸ್ಟೇಷನಲ್ಲಿ ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುದರ್ಶನ್ ಯಾದವ್ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಐಪಿಸಿ ಸೆಕ್ಷನ್ 302 & 376 ರ ಅಡಿ (ಅತ್ಯಾಚಾರ ಮತ್ತು ಕೊಲೆ) ಪ್ರಕರಣ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನವೋದಯ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಮಧು ಆತ್ಮಹತ್ಯೆ ಮಾಡಿಕೊಂಡಿಲ್ಲ. ಇದು ರೇಪ್ ಅಂಡ್ ಮರ್ಡರ್ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧುಗೆ ನ್ಯಾಯ ಕೊಡಿಸುವಂತೆ ಸೋಶಿಯಲ್ ಮೀಡಿಯಾದಲ್ಲಿ ‘ಜಸ್ಟಿಸ್ ಫಾರ್ ಮಧು’ ಹೆಸರಿನಲ್ಲಿ ಆಂದೋಲನ ಆರಂಭಿಸಿದ್ದಾರೆ.
“ಮಧು ಆತ್ಮಹತ್ಯೆ ಮಾಡಿಕೊಂಡಿಲ್ಲ, ಅದು ರೇಪ್ & ಮರ್ಡರ್”..?
TRENDING ARTICLES