Monday, December 23, 2024

ಮತಗಟ್ಟೆಯಲ್ಲಿ ಗಲಾಟೆ: ಮತದಾರ ಸಾವು

ನವದೆಹಲಿ: ದೇಶದಲ್ಲಿ ಮೂರನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ಮತದಾನದ ವೇಳೆ ಹಿಂಸಾಚಾರ ನಡೆದಿದೆ. ಮುರ್ಶಿದಾಬಾದ್‌ನಲ್ಲಿ ಕಾಂಗ್ರೆಸ್‌ ಟಿಎಂಸಿ ನಡುವೆ ಘರ್ಷಣೆ ಉಂಟಾಗಿದ್ದು, ಈ ವೇಳೆ ಮತಹಾಕಲು ಬಂದಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 7 ಜನ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿಡಿಗೇಡಿಗಳು ಕಚ್ಚಾ ಬಾಂಬ್​ ಎಸೆದು ಗಲಾಟೆ ನಡೆಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ 5 ಲೋಕಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆದಿದೆ.

RELATED ARTICLES

Related Articles

TRENDING ARTICLES