ಕೊಲ್ಕತ್ತಾ: ಕೇಂದ್ರ ಸಚಿವರ ಕಾರಿನ ಮೇಲೆ ಟಿಎಂಸಿ ಕಾರ್ಯಕರ್ತರ ದಾಳಿ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಅಸನ್ಸೋಲ್ನಲ್ಲಿ ನಡೆದಿದೆ. ದಾಳಿಯಿಂದಾಗಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಕಾರಿನ ಗಾಜುಗಳು ಪುಡಿಯಾಗಿವೆ.
ಪಶ್ಚಿಮ ಬಂಗಾಳದ ಅಸನ್ಸೋಲ್ ಕ್ಷೇತ್ರದಲ್ಲಿ ಟಿಎಂಸಿ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಉಭಯ ಪಕ್ಷಗಳ ಕಾರ್ಯಕರ್ತರು ದೊಣ್ಣೆ ಹಿಡಿದು ಪರಸ್ಪರ ಬಡಿದಾಡಿಕೊಂಡಿದ್ದಾರೆ. ಅಸನ್ಸೋಲ್ ಮತಗಟ್ಟೆ ಬಳಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರ ಹರಸಾಹಸಪಟ್ಟಿದ್ದಾರೆ. ಅಸನ್ಸೋಲ್ ಕ್ಷೇತ್ರದಿಂದ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಕೇಂದ್ರ ಸಚಿವರಿಗೆ ಟಿಎಂಸಿ ಅಭ್ಯರ್ಥಿ ಮೂನ್ ಮೂನ್ ಸೇನ್ ಪ್ರಬಲ ಪೈಪೋಟಿ ನೀಡಿದ್ದಾರೆ.