ಬಾಗಲಕೋಟೆ : ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲೂ ಭಾರಿ ಬದಲಾವಣೆ ಆಗುತ್ತೆ ಅನ್ನೋ ಚರ್ಚೆ ಬಲವಾಗಿ ಕೇಳಿಬರುತ್ತಿದೆ. ಅದಕ್ಕೆ ತಕ್ಕಂತೆ ಮೈತ್ರಿ ನಾಯಕರ ಮುನಿಸು ಕೂಡ ತಾರಕಕ್ಕೆ ಏರಿದ್ದು, ಪರಸ್ಪರ ಬಿರುಸಿನ ವಾಕ್ಸಮರ ನಡೆಸುತ್ತಿದ್ದಾರೆ. ಈ ನಡುವೆ ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚಿಸಲು ಉತ್ಸುಕರಾಗಿದ್ದಾರೆ.
ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಇಂದು ಈ ಬಗ್ಗೆ ಮತ್ತೆ ಮಾತಾಡಿದ್ದಾರೆ. ಮೇ.23ರ ನಂತ್ರ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಅಂತ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ನಮ್ಮ ಸಂಖ್ಯಾಬಲ 104 ಇದೆ. 106 ಆಗುತ್ತೆ. ಕಾಂಗ್ರೆಸ್, ಜೆಡಿಎಸ್ ಅತೃಪ್ತರು ಬಿಜೆಪಿಗೆ ಬರ್ತಿದ್ದಾರೆ. ರಮೇಶ್ ಜಾರಕಿಹೊಳಿ ಸೇರಿದಂತೆ ಅನೇಕರು ಬಿಜೆಪಿ ಸೇರಲಿದ್ದಾರೆ. ಮೇ.23ರ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುತ್ತೆ ಅಂದರು.
ಮೇ 23ರ ನಂತ್ರ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ : ಈಶ್ವರಪ್ಪ
TRENDING ARTICLES