Thursday, January 23, 2025

ಸಿದ್ದರಾಮಯ್ಯ ಸಾಧ್ಯವಾದ್ರೆ ಶಾಸಕರನ್ನ ಹಿಡಿದಿಡ್ಕೊಳ್ಳಲಿ, ಇಲ್ಲಾಂದ್ರೆ ಬಳೆ ತೊಡಲಿ: ಶೋಭಾ

ಹುಬ್ಬಳ್ಳಿ: ಸಿದ್ದರಾಮಯ್ಯ ಅವರಿಗೆ ಶಕ್ತಿ ಇದ್ರೆ ಶಾಸಕರನ್ನು ಹಿಡಿದಿಟ್ಟುಕೊಳ್ಳಲಿ. ಸಾಧ್ಯವಾಗದಿದ್ದರೆ ಕೈಗೆ ಬಳೆ ತೊಟ್ಟುಕೊಳ್ಳಲಿ ಅಂತ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಸಿದ್ದರಾಮಯ್ಯ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಹೀಗಾಗಿ ದೇವರಾಜ ಅರಸು ಅವರನ್ನ ಹೋಲಿಸಿಕೊಳ್ತಿದ್ದಾರೆ. ಸಿದ್ದರಾಮಯ್ಯಗೆ ಅರಸುರನ್ನ ಹೋಲಿಸಿಕೊಳ್ಳುವ ನೈತಿಕತೆಯಿಲ್ಲ. ಕೈಲಾಗದವರು ಮೈ ಪರಚಿಕೊಂಡರು ಎನ್ನುವ ಸ್ಥಿತಿ ಸಿದ್ದರಾಮಯ್ಯನವರದ್ದು” ಅಂತ ವ್ಯಂಗ್ಯ ಮಾಡಿದ್ದಾರೆ.

ಪ್ರಚಾರದ ಮಧ್ಯೆ ಕುಂದಗೋಳ ಪಟ್ಟಣದ ಅಂಗನವಾಡಿ ಕೇಂದ್ರಕ್ಕೆ ಶೋಭಾ ಕರಂದ್ಲಾಜೆ ಭೇಟಿ ನೀಡಿದ್ದಾರೆ. ಭೇಟಿ‌ ಸಂದರ್ಭದಲ್ಲಿ ಗರ್ಭಿಣಿಯರಿಗೆ ನೀಡಲಾಗುತ್ತಿದ್ದ ಆಹಾರ ಧಾನ್ಯದಲ್ಲಿ ಹುಳು ಪತ್ತೆಯಾಗಿದ್ದು, ಅಂಗನವಾಡಿ ಕಾರ್ಯಕರ್ತರನ್ನುಸಂಸದೆ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಸಂಸದೆ ಶೋಭಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES

Related Articles

TRENDING ARTICLES