ಬೆಂಗಳೂರು: ಜೆಡಿಎಸ್ ಮುಖಂಡ ಹೆಚ್.ಡಿ. ರೇವಣ್ಣಗೆ ಮುಖ್ಯಮಂತ್ರಿ ಆಗುವ ಅರ್ಹತೆಯಿದೆ ಅಂತ ಟ್ವೀಟ್ ಮಾಡೋ ಮೂಲಕ ಮಾಜಿ ಸಿಎಂ ಸಿದ್ದರಾಮ್ಯ ದೋಸ್ತಿ ಪಕ್ಷಗಳಲ್ಲಿ ಸಂಚಲನ ಮೂಡಿಸಿದ್ದಾರೆ.
ಈಗಾಗಲೇ ಸಿಎಂ ಪಟ್ಟದ ಮೇಲೆ ಹಲವು ರಾಜಕೀಯ ನಾಯಕರು ಬಹಿರಂಗವಾಗಿ ಒಲವು ವ್ಯಕ್ತಪಡಿಸಿಕೊಂಡಿದ್ದು ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ಬೇಕು ಅನ್ನೋ ಮಾತುಗಳು ಕೇಳಿ ಬಂದಿತ್ತು. ಇದೀಗ ಮಾಜಿ ಸಿಎಂ ಸಿಎಂ ಸ್ಥಾನಕ್ಕೆ ಖರ್ಗೆ ಹೆಸರನ್ನು ಸೇರಿಸಿ ಜೆಡಿಎಸ್ನಲ್ಲಿ ಸಂಚಲನ ಮೂಡಿಸಿದ್ದಾರೆ. “ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ ಅದಕ್ಕಿಂತ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಹಲವರಿಗೆ ಸಿಎಂ ಸ್ಥಾನದ ಅರ್ಹತೆಯಿದೆ. ಅಂತೆಯೇ ರೇವಣ್ಣ ಕೂಡ ಸಿಎಂ ಆಗಿರುವ ಅರ್ಹತೆ ಹೊಂದಿದ್ದಾರೆ” ಅಂತ ಟ್ವೀಟ್ ಮಾಡಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ.
ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ,
ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ ಸ್ಥಾನದ ಅರ್ಹತೆಯ ಬಹಳ ಜನ ಇದ್ದಾರೆ. ಅವರಲ್ಲಿ ಹೆಚ್.ಡಿ.ರೇವಣ್ಣ ಕೂಡಾ ಒಬ್ಬರು.
ಎಲ್ಲಕ್ಕೂ ಕಾಲ ಕೂಡಿ ಬರಬೇಕು.— Siddaramaiah (@siddaramaiah) May 16, 2019