Wednesday, January 22, 2025

ಇಂದು ಬಹಿರಂಗ ಪ್ರಚಾರಕ್ಕೆ ತೆರೆ..!

ನವದೆಹಲಿ: ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನದ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ. ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಮೇ 19ರಂದು ನಡೆಯಲಿದ್ದು, ಒಂದು ಕೇಂದ್ರಾಡಳಿತ ಪ್ರದೇಶ ಸೇರಿ 7 ರಾಜ್ಯಗಳ 59 ಕ್ಷೇತ್ರಗಳಲ್ಲಿ ಜನ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಇಂದು 7 ರಾಜ್ಯಗಳಲ್ಲಿ, ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.

ಮಧ್ಯಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸಲಿದ್ದು, ಪಶ್ಚಿಮ ಬಂಗಾಳದಲ್ಲಿ ಒಂದು ದಿನ ಮೊದಲೇ ಪ್ರಚಾರ ಕೊನೆಗೊಂಡಿದೆ. ಬಿಜೆಪಿ-ಟಿಎಂಸಿ ಘರ್ಷಣೆಯಿಂದ ನಿನ್ನೆಯೇ ಪಶ್ಚಿಮ ಬಂಗಾಳದಲ್ಲಿ ಬಹಿರಂಗ ಪ್ರಚಾರ ಅಂತ್ಯವಾಗಿದೆ.

RELATED ARTICLES

Related Articles

TRENDING ARTICLES