Monday, December 23, 2024

ಇಂದು ಚಿಂಚೋಳಿ, ಕುಂದಗೋಳ ಉಪಚುನಾವಣೆ

ಬೆಂಗಳೂರು: ಸಿ.ಎಸ್.ಶಿವಳ್ಳಿ ಅಕಾಲಿಕ ಮರಣದಿಂದ ತೆರವಾಗಿದ್ದ ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಇಂದು ಉಪಚುನಾವಣೆ ನಡೆಯಲಿದೆ. ಕ್ಷೇತ್ರದಲ್ಲಿ 1,89,435 ಮತದಾರರಿದ್ದು, ಒಟ್ಟು 214 ಮತಗಟ್ಟೆಗಳನ್ನ ಸ್ಥಾಪಿಸಲಾಗಿದೆ. ಚುನಾವಣಾ ಕರ್ತವ್ಯಕ್ಕೆ 968 ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ. ಇನ್ನು, ಕ್ಷೇತ್ರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕ್ಷೇತ್ರದಲ್ಲಿ 38 ಸೂಕ್ಷ್ಮ ಹಾಗೂ 33 ಅತಿಸೂಕ್ಷ್ಮ ಮತಗಟ್ಟೆಗಳನ್ನ ಗುರುತಿಸಲಾಗಿದೆ.

ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲೂ ಚುನಾವಣಾ ಅಖಾಡ ರಂಗೇರಿದೆ. ಮತದಾನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್,  ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೋಡ್ ಸೇರಿದಂತೆ ಅಖಾಡದಲ್ಲಿ ಒಟ್ಟು 17 ಅಭ್ಯರ್ಥಿಗಳಿದ್ದಾರೆ. ಒಟ್ಟು 1,93,782 ಮತದಾರರು ಇಂದು ತಮ್ಮ ಹಕ್ಕು ಚಲಾಯಿಸಲಿದ್ದರೆ. ಮತದಾನಕ್ಕೆ 241 ಮತಗಟ್ಟೆಗಳನ್ನ ಸ್ಥಾಪಿಸಲಾಗಿದೆ. ಇದರಲ್ಲಿ 60 ಸೂಕ್ಷ್ಮ ಮತಗಟ್ಟೆಗಳಿವೆ. ಚುನಾವಣೆಗೆ 1,112 ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಭದ್ರತೆ ಒದಗಿಸಲಾಗಿದೆ.

RELATED ARTICLES

Related Articles

TRENDING ARTICLES