ನವದೆಹಲಿ: ವಿಪಕ್ಷಗಳು ಚುನಾವಣಾ ಆಯೋಗದ ವಿರುದ್ಧ ನವದೆಹಲಿಯಲ್ಲಿಂದು ಪ್ರತಿಭಟನೆ ನಡೆಯಲಿವೆ. ಇವಿಎಂ, ವಿವಿಪ್ಯಾಟ್ ದುರ್ಬಳಕೆ ಮಾಡಿದ್ದಾರೆಂದು ವಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು ಅಹ್ಮದ್ ಪಟೇಲ್, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬುನಾಯ್ಡು ನೇತೃತ್ವದಲ್ಲಿ ಧರಣಿ ನಡೆಯಲಿದೆ. ಮಹಾಘಟಬಂಧನ್ನ ಎಲ್ಲಾ ಪ್ರಮುಖ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.
ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರೂ ಇಂದು ದೆಹಲಿಗೆ ತೆರಳಲಿದ್ದಾರೆ. ಬೆಳಗ್ಗೆ 11 ಗಂಟೆಗೆ HAL ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಪ್ರಯಾಣಿಸಲಿದ್ದಾರೆ. ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ನಡೆಯುವ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. 21 ವಿಪಕ್ಷಗಳ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಭಾನುವಾರ ಚುನಾವಣೋತ್ತರ ಸಮೀಕ್ಷೆ ವರದಿಗಳು ಪ್ರಕಟವಾದ ಬೆನ್ನಲ್ಲೇ ವಿಪಕ್ಷಗಳು ಪ್ರತಿಭಟನೆಗೆ ಕರೆ ನೀಡಿದ್ದವು.