ಕಲಬುರಗಿ ಜಿಲ್ಲೆಯ ಚಿಂಚೋಳಿ ಮತ್ತು ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಕೂಡ ಹೊರಬಿದ್ದಿದೆ. ಚಿಂಚೋಳಿಯಲ್ಲಿ ಉಮೇಶ್ ಜಾಧವ್ ಅವರ ಪುತ್ರ ಡಾ. ಅವಿನಾಶ್ ಜಾಧವ್ ಅವರು ಮೈತ್ರಿ ಅಭ್ಯರ್ಥಿ ಸುಭಾಷ್ ರಾಥೋಡ್ ಅವರ ವಿರುದ್ಧ ಜಯಗಳಿಸಿದ್ದಾರೆ.
ಕುಂದಗೋಳದಲ್ಲಿ ಬಿಜೆಪಿ ಅಭ್ಯರ್ಥಿ ಚಿಕ್ಕಣವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿ ಗೆಲುವಿನ ನಗೆ ಬೀರಿದ್ದಾರೆ.
ಉಮೇಶ್ ಜಾಧವ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರಿಂದ ಚಿಂಚೋಳಿಯಲ್ಲಿ, ಸಿ.ಎಸ್ ಶಿವಳ್ಳಿ ಅವರ ನಿಧನದಿಂದ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆದಿತ್ತು. ಒಂದರಲ್ಲಿ ಬಿಜೆಪಿ, ಇನ್ನೊಂದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಪಡೆದಿದ್ದಾರೆ.
ಚಿಂಚೋಳಿಯಲ್ಲಿ ಬಿಜೆಪಿ, ಕುಂದಗೋಳದಲ್ಲಿ ಕಾಂಗ್ರೆಸ್ಗೆ ಗೆಲುವು
TRENDING ARTICLES